1 Samuel 13:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.
Kannada BSI Bible 2016
ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು.
Kannada Bible (KNCL) BSI 2016
ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.