1 Samuel 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್‌ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
Kannada BSI Bible 2016
ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಬೇತ್‍ಹೋರೋನಿನ ಕಡೆಗೂ ಮತ್ತೊಂದು ಜೆಬೋಯೀಮ್ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.
Kannada Bible (KNCL) BSI 2016
ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.