1 Samuel 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
Kannada BSI Bible 2016
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
Kannada Bible (KNCL) BSI 2016
ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.