1 Samuel 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.
Kannada BSI Bible 2016
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.
Kannada Bible (KNCL) BSI 2016
ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.