1 Samuel 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗಹೋಮವನ್ನು ಅರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
Kannada BSI Bible 2016
ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.
Kannada Bible (KNCL) BSI 2016
ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.