1 Samuel 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
Kannada BSI Bible 2016
ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು
Kannada Bible (KNCL) BSI 2016
ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು.