1 Samuel 14:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾತಾನನು ತನ್ನ ಕೈಕಾಲುಗಳಿಂದ ಬೆಟ್ಟವನ್ನು ಹತ್ತಿದನು. ಅವನನ್ನು ಹಿಂಬಾಲಿಸಿಕೊಂಡು ಅವನ ಸಹಾಯಕನೂ ಬೆಟ್ಟವನ್ನು ಹತ್ತಿದನು. ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡಿದರು ಅವರು ಮೊದಲ ಆಕ್ರಮಣದಲ್ಲಿ ಅರ್ಧಎಕರೆ ಸ್ಥಳದಲ್ಲಿದ್ದ ಇಪ್ಪತ್ತು ಮಂದಿ ಫಿಲಿಷ್ಟಿಯರನ್ನು ಕೊಂದರು. ಆಕ್ರಮಣಮಾಡಲು ಬಂದವರೊಡನೆ ಯೋನಾತಾನನು ಮುಖಾಮುಖಿಯಾಗಿ ಹೋರಾಡಿದನು. ಯೋನಾತಾನನ ಸಹಾಯಕನು ಅವನ ಹಿಂದೆ ಬರುತ್ತಾ ಗಾಯಾಳುಗಳನ್ನು ಕೊಂದನು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.
Kannada BSI Bible 2016
ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಕಾಲುಗಳಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.
Kannada Bible (KNCL) BSI 2016
ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಮೊಣಕಾಲನ್ನು ಹಾಗು ಕೈಗಳನ್ನು ಊರುತ್ತಾ ಕಣಿವೆಯಿಂದ ಮೇಲೆ ಬಂದರು. ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕೆ ಉರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ತನ್ನ ಕೈಗಳಿಂದಲೂ, ಕಾಲುಗಳಿಂದಲೂ ಹತ್ತಿದನು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಹತ್ತಿದನು. ಆಗ ಫಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.