1 Samuel 14:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
Kannada BSI Bible 2016
ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.
Kannada Bible (KNCL) BSI 2016
ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.