1 Samuel 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,
Kannada BSI Bible 2016
ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ
Kannada Bible (KNCL) BSI 2016
ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು.