1 Samuel 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದ್ದರಿಂದ ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
Kannada BSI Bible 2016
ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲ್ಯರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
Kannada Bible (KNCL) BSI 2016
ಎಫ್ರಯಿಮ್ ಪರ್ವತಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ಸಮಾಚಾರ ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯೀಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲರು ಕೇಳಿದಾಗ, ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದ್ದರು.