1 Samuel 14:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
Kannada BSI Bible 2016
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದದರಿಂದ ಅವನು ತನ್ನ ಕೋಲನ್ನು ಜೇನು ತೊಟ್ಟಿಯಲ್ಲಿ ಚುಚ್ಚಿ ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.
Kannada Bible (KNCL) BSI 2016
ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.