1 Samuel 14:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.
Kannada BSI Bible 2016
ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು.
Kannada Bible (KNCL) BSI 2016
ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು,” ಎಂದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು.