1 Samuel 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.
Kannada BSI Bible 2016
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಸೌಲನಿಗೆ - ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ಅಭಿಷೇಕಿಸುವದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವದನ್ನು ಕೇಳು.
Kannada Bible (KNCL) BSI 2016
ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.