1 Samuel 15:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ
Kannada BSI Bible 2016
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.
Kannada Bible (KNCL) BSI 2016
ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”