1 Samuel 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.
Kannada BSI Bible 2016
ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.
Kannada Bible (KNCL) BSI 2016
ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.