1 Samuel 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು, “ನೀನು ಮೊದಲು ನಿನ್ನನ್ನು ಅಲ್ಪನೆಂದು ತಿಳಿದಿದ್ದೆ. ಯೆಹೋವನು ನಿನ್ನನ್ನು ಇಸ್ರೇಲರಿಗೆ ರಾಜನನ್ನಾಗಿ ಆರಿಸಿಕೊಂಡದ್ದರಿಂದ ಇಸ್ರೇಲ್ ಕುಲಗಳಿಗೆ ನಾಯಕನಾದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.
Kannada BSI Bible 2016
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.
Kannada Bible (KNCL) BSI 2016
“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?