1 Samuel 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
Kannada BSI Bible 2016
ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು.
Kannada Bible (KNCL) BSI 2016
ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.