1 Samuel 15:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
Kannada BSI Bible 2016
ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.
Kannada Bible (KNCL) BSI 2016
“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.