1 Samuel 15:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
Kannada BSI Bible 2016
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
Kannada Bible (KNCL) BSI 2016
ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.