1 Samuel 15:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
Kannada BSI Bible 2016
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.
Kannada Bible (KNCL) BSI 2016
ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.