1 Samuel 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
Kannada BSI Bible 2016
ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
Kannada Bible (KNCL) BSI 2016
ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.