1 Samuel 15:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ಸಮುವೇಲನು ತನ್ನ ಜೀವಿತದ ಅವಧಿಯಲ್ಲಿ ಸೌಲನನ್ನು ನೋಡಲಿಲ್ಲ. ಸಮುವೇಲನು ಸೌಲನಿಗಾಗಿ ಬಹಳ ದುಃಖಪಟ್ಟನು. ಸೌಲನನ್ನು ಇಸ್ರೇಲರ ರಾಜನನ್ನಾಗಿ ಮಾಡಿದ್ದಕ್ಕೆ ಯೆಹೋವನು ಬಹಳ ಸಂತಾಪಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
Kannada BSI Bible 2016
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.
Kannada Bible (KNCL) BSI 2016
ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು.