1 Samuel 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
Kannada BSI Bible 2016
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
Kannada Bible (KNCL) BSI 2016
ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.