1 Samuel 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
Kannada BSI Bible 2016
ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
Kannada Bible (KNCL) BSI 2016
ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.