1 Samuel 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷಯನು ತನ್ನ ಏಳು ಜನ ಮಕ್ಕಳನ್ನು ಸಮುವೇಲನಿಗೆ ತೋರಿಸಿದನು. ಆದರೆ ಸಮುವೇಲನು, “ಯೆಹೋವನು ಇವರಲ್ಲಿ ಯಾರೊಬ್ಬನನ್ನೂ ಆರಿಸಿಕೊಳ್ಳಲಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.
Kannada BSI Bible 2016
ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಅವನ ಬಳಿಗೆ ಬರಮಾಡಿದರೂ ಅವನು - ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ ಎಂದು ನುಡಿದನು.
Kannada Bible (KNCL) BSI 2016
ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಇಷಯನು ತನ್ನ ಏಳುಮಂದಿ ಪುತ್ರರನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಸಮುಯೇಲನು ಇಷಯನಿಗೆ, “ಯೆಹೋವ ದೇವರು ಇವರಲ್ಲಿ ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ,” ಎಂದನು.