1 Samuel 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು
Kannada BSI Bible 2016
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು
Kannada Bible (KNCL) BSI 2016
ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.