1 Samuel 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.
Kannada BSI Bible 2016
ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.
Kannada Bible (KNCL) BSI 2016
ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.