1 Samuel 16:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಕಳುಹಿಸಿದ ದುರಾತ್ಮವು ಸೌಲನ ಮೈಮೇಲೆ ಬಂದಾಗಲೆಲ್ಲಾ, ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ದುರಾತ್ಮವು ಸೌಲನನ್ನು ಬಿಟ್ಟುಹೋಗಿ ಅವನಿಗೆ ಉಪಶಮನವಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
Kannada BSI Bible 2016
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವದು; ಅವನು ಉಪಶಮನಹೊಂದಿ ಚೆನ್ನಾಗಿರುವನು.
Kannada Bible (KNCL) BSI 2016
ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.