1 Samuel 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದುದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.
Kannada BSI Bible 2016
ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನೀನು ಮಾಡಬೇಕಾದದ್ದನ್ನು ನಾನೇ ತಿಳಿಸುತ್ತೇನೆ; ನಾನು ಯಾವನನ್ನು ತೋರಿಸುತ್ತೇನೋ ಅವನನ್ನು ನೀನು ಅಭಿಷೇಕಿಸಬೇಕು ಎಂದನು.
Kannada Bible (KNCL) BSI 2016
ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.