1 Samuel 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
Kannada BSI Bible 2016
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.
Kannada Bible (KNCL) BSI 2016
ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.