1 Samuel 16:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
Kannada BSI Bible 2016
ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬರಲು ಅವನು ಎಲೀಯಾಬನನ್ನು ನೋಡಿ - ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.
Kannada Bible (KNCL) BSI 2016
ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.