1 Samuel 16:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನು ಸಮುವೇಲನಿಗೆ, “ ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
Kannada BSI Bible 2016
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.
Kannada Bible (KNCL) BSI 2016
ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.