1 Samuel 17:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.
Kannada BSI Bible 2016
ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಯುದ್ಧಮಾಡುವದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀವಿುನಲ್ಲಿ ಪಾಳೆಯ ಮಾಡಿಕೊಂಡರು.
Kannada Bible (KNCL) BSI 2016
ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.