1 Samuel 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.
Kannada BSI Bible 2016
ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವನು - ಈ ಹೊತ್ತು ಇಸ್ರಾಯೇಲ್ ಸೈನ್ಯದವರನ್ನು ಹೀಯಾಳಿಸುತ್ತೇನೆ; ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ ಎಂದು ಕೊಚ್ಚಿಕೊಂಡನು.
Kannada Bible (KNCL) BSI 2016
ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು.