1 Samuel 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.
Kannada BSI Bible 2016
ಹಾಗೆಯೇ ಸೌಲನೂ ಇಸ್ರಾಯೇಲ್‌ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನೂ ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.
Kannada Bible (KNCL) BSI 2016
ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.