1 Samuel 17:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು, “ ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,
Kannada BSI Bible 2016
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು
Kannada Bible (KNCL) BSI 2016
ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.