1 Samuel 17:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.
Kannada BSI Bible 2016
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು
Kannada Bible (KNCL) BSI 2016
ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.