1 Samuel 17:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಮಾತನಾಡುತ್ತಿರುವುದನ್ನು ಕೆಲವು ಜನರು ಕೇಳಿಸಿಕೊಂಡರು. ಅವರು ಸೌಲನಿಗೆ ದಾವೀದನ ಬಗ್ಗೆ ಹೇಳಿದರು. ಸೌಲನು ದಾವೀದನನ್ನು ಅವನ ಹತ್ತಿರ ಕರೆತರಲು ಅಪ್ಪಣೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.
Kannada BSI Bible 2016
ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಈ ಪ್ರಕಾರ ವಿಚಾರಿಸುತ್ತಿರುವದನ್ನು ಕೇಳಿದವರು ಸೌಲನಿಗೆ ತಿಳಿಸಿದರು; ಅವನು ಅವನನ್ನು ಕರೇ ಕಳುಹಿಸಿದನು.
Kannada Bible (KNCL) BSI 2016
ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.