1 Samuel 17:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು.
Kannada BSI Bible 2016
ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವನೊಡನೆ ಕಾದಾಡಲಾರಿ; ನೀನು ಇನ್ನೂ ಹುಡುಗನು. ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.