1 Samuel 17:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
Kannada BSI Bible 2016
ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ
Kannada Bible (KNCL) BSI 2016
ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.