1 Samuel 17:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.
Kannada BSI Bible 2016
ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಕೋಲನ್ನು ತೆಗೆದುಕೊಂಡು ಹೊರಟು ಹಳ್ಳದಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.
Kannada Bible (KNCL) BSI 2016
ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು.