1 Samuel 17:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.
Kannada BSI Bible 2016
ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ.
Kannada Bible (KNCL) BSI 2016
ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.