1 Samuel 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತಾಮ್ರದ ಶಿರಸ್ತ್ರಾಣವನ್ನು ಧರಿಸಿದ್ದನು. ಮೀನಿನ ಮೇಲಿರುವ ಚಿಪ್ಪುಗಳಂತಿದ್ದ ತಾಮ್ರದ ಕವಚವನ್ನು ಅವನು ತೊಟ್ಟಿದ್ದನು. ಅದು ನೂರಿಪ್ಪತ್ತೈದು ಪೌಂಡ್‌ಗಳಷ್ಟು ಭಾರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.)
Kannada BSI Bible 2016
ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಶಿರಸ್ತ್ರಾಣವು ತಾಮ್ರದ್ದು; ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು ಐದು ಸಾವಿರ ರೂಪಾಯಿ ತೂಕವಾಗಿತ್ತು.
Kannada Bible (KNCL) BSI 2016
ಅವನು ಧರಿಸಿದ್ದು ಕಂಚಿನ ಶಿರಸ್ತ್ರಾಣ. ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲಾಗಿದ್ದ ಅವನ ಕವಚ ಸುಮಾರು ಐವತ್ತೇಳು ಕಿಲೋಗ್ರಾಮಿನಷ್ಟು ತೂಕವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.