1 Samuel 18:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾರನೆಯ ದಿನ, ದೇವರಿಂದ ಬಂದ ದುರಾತ್ಮವು ಸೌಲನನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು. ಸೌಲನು ತನ್ನ ಮನೆಯಲ್ಲಿ ಹುಚ್ಚನಂತೆ ಕೂಗಿಕೊಳ್ಳುತ್ತಿದ್ದನು. ಆಗ ದಾವೀದನು ಎಂದಿನಂತೆ ಕಿನ್ನರಿಯನ್ನು ಬಾರಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.
Kannada BSI Bible 2016
ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.
Kannada Bible (KNCL) BSI 2016
ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.