1 Samuel 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ಕೈಯಲ್ಲಿ ಒಂದು ಈಟಿಯಿತ್ತು. “ಗೋಡೆಗೆ ಹತ್ತಿಕೊಳ್ಳುವಂತೆ ನಾನು ದಾವೀದನನ್ನು ತಿವಿಯುವೆ” ಎಂದು ಅವನು ಯೋಚಿಸಿ ಎರಡು ಬಾರಿ ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಲವೂ ತಪ್ಪಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
Kannada BSI Bible 2016
ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
Kannada Bible (KNCL) BSI 2016
ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.