1 Samuel 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲಿನ ಮತ್ತು ಯೆಹೂದದ ಜನರೆಲ್ಲ ದಾವೀದನನ್ನು ಪ್ರೀತಿಸಿದರು. ಅವನು ಯುದ್ಧದಲ್ಲಿ ಅವರನ್ನು ಮುನ್ನಡೆಸಿದ್ದರಿಂದ ಮತ್ತು ಅವರಿಗೋಸ್ಕರ ಹೋರಾಡಿದ್ದರಿಂದ ಅವರು ಅವನನ್ನು ಬಹಳವಾಗಿ ಪ್ರೀತಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
Kannada BSI Bible 2016
ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
Kannada Bible (KNCL) BSI 2016
ಆದರೆ ಇಸ್ರಯೇಲರಿಗೆ ಹಾಗು ಯೆಹೂದ್ಯರಿಗೆ ದಾವೀದನ ಮೇಲೆ ಮಿಗಿಲಾದ ಪ್ರೀತಿ. ಏಕೆಂದರೆ ಅವನು ತಮ್ಮ ಸಂಗಡವೇ ಬಂದು ಮುಂದಾಳತ್ವ ವಹಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.