1 Samuel 18:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
Kannada BSI Bible 2016
ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.
Kannada Bible (KNCL) BSI 2016
ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.