1 Samuel 18:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
Kannada BSI Bible 2016
ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.
Kannada Bible (KNCL) BSI 2016
“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.