1 Samuel 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.
Kannada BSI Bible 2016
ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಸೇವಕರಿಗೆ - ನೀವು ದಾವೀದನಿಗೆ ಗುಪ್ತವಾಗಿ - ಅರಸನು ನಿನಗೆ ಒಲಿಯುತ್ತಾನೆ; ಅವನ ಎಲ್ಲಾ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ; ನೀನು ಅರಸನ ಅಳಿಯನಾಗು ಎಂದು ಪುಸಲಾಯಿಸಿರಿ ಅಂದನು.
Kannada Bible (KNCL) BSI 2016
ಅಲ್ಲದೆ ತನ್ನ ಸೈನಿಕರಿಗೆ, \ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು.