1 Samuel 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನ ಅಧಿಕಾರಿಗಳು ದಾವೀದನಿಗೆ ಆ ವಿಚಾರಗಳನ್ನು ತಿಳಿಸಿದರು. ಆದರೆ ದಾವೀದನು, “ರಾಜನ ಅಳಿಯನಾಗುವುದು ಸುಲಭವೆಂದು ನೀವು ತಿಳಿದಿರುವಿರಾ? ರಾಜನ ಮಗಳಿಗೆ ಕೊಡಲು ನನ್ನ ಹತ್ತಿರ ಹಣವೇ ಇಲ್ಲ! ನಾನು ಕೇವಲ ಬಡವ, ಸಾಮಾನ್ಯ ಮನುಷ್ಯ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.
Kannada BSI Bible 2016
ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು - ಅರಸನ ಅಳಿಯನಾಗುವದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ ಅಲ್ಪನೂ ಆಗಿರುತ್ತೇನಲ್ಲಾ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.